ದೇಶವಿಶಾಖಪಟ್ಟಣ: ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಿಂದ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಶಾಲಾ ಮಕ್ಕಳು, ಭೀಕರ ವಿಡಿಯೊ
ವಿಶಾಖಪಟ್ಟಣಂ ನಗರದ ಹೃದಯ ಭಾಗದಲ್ಲಿರುವ ಸಂಗಮ್-ಸರತ್ ವೃತ್ತದಲ್ಲಿ ಇಂದು ಬುಧವಾರ ಬೆಳಗ್ಗೆ ಶಾಲಾ ಆಟೋಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಎಂಟು ಮಕ್ಕಳು ವಾಹನದಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.