ರಾಜ್ಯಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆ
ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.