ರಾಜ್ಯಟಿಪ್ಪು, ಅಬ್ಬಕ್ಕ, ರಾಯಣ್ಣ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಕಡಿತ ಅಂತಿಮವಾಗಿಲ್ಲ: ಸುರೇಶ್ ಕುಮಾರ್
ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.