ರಾಜ್ಯವೋಟರ್ ಐಡಿ ಅಕ್ರಮ: ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಿಬಿಎಂಪಿ, ಇಲಾಖಾ ತನಿಖೆಗೆ ಆದೇಶ
ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಎಡಿಇಒ) ಸಲ್ಲಿಸಿರುವ ತನಿಖಾ ವರದಿಯ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಮೂವರು ಹೆಚ್ಚುವರಿ ಕಂದಾಯ ಅಧಿಕಾರಿಗಳನ್ನು (ಎಆರ್ಒ) ಅಮಾನತುಗೊಳಿಸಿದ್ದಾರೆ ಮತ್ತು ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.