ಶವ ಪತ್ತೆ

ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!
ಅಸೀಶ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಿಕಟವರ್ತಿ ಹಾಗೂ ಆಪ್ತರಾಗಿದ್ದರು. ಸುದೀರ್ಘ ಕಾಲದಿಂದ ತೃಣಮೂಲ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದ ಅವರು, ಪಕ್ಷದ ಸಂಘಟನೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭಾ ಕಾರ್ಯಕಲಾಪಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮಂಡ್ಯ: ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವ ಪತ್ತೆ!
ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ ಬರುವುದಿಲ್ಲ ಎಂದು ಕುಟುಂಬಕ್ಕೆ ತಿಳಿಸಿ ಹೊರಟಿದ್ದ.

ಜಮ್ಮು-ಕಾಶ್ಮೀರ: ಸಾಂಬಾದಲ್ಲಿ BSF ಯೋಧನ ಶವ ಪತ್ತೆ; ಹೃದಯಾಘಾತದಿಂದ CRPF ಕಾನ್‌ಸ್ಟೆಬಲ್ ಸಾವು
ಪಂಜಾಬ್‌ನ ಫಿರೋಜ್‌ಪುರ ನಿವಾಸಿ ಕಾನ್‌ಸ್ಟೆಬಲ್ ಸುಖದೀಪ್ ಸಿಂಗ್ ಸೋಮವಾರ ಸಂಜೆ ರೆಹಿಯಾನ್ ಗ್ರಾಮದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಷ್ಯಾ: ಹಾಲು ತರಲು ಹೋಗಿದ್ದ ಭಾರತೀಯ ವಿದ್ಯಾರ್ಥಿ ಕಣ್ಮರೆ; 19 ದಿನಗಳ ನಂತರ ಮೃತದೇಹ ಪತ್ತೆ!
ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!
ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿರುವ ಕಟ್ಟಡಕ್ಕೆ ಭೇಟಿ ನೀಡಿದ ಕಾರ್ಮಿಕರೊಬ್ಬರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು: ನಿಂತಿದ್ದ ಖಾಸಗಿ ಶಾಲಾ ಬಸ್ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ವ್ಯಾನ್ ಮಾಲೀಕ ಅರುಣ್ ಕೆಲವು ತಿಂಗಳ ಹಿಂದೆ ಒಎಂಬಿಆರ್ ಲೇಔಟ್‌ನಲ್ಲಿರುವ ಅಗ್ನಿಶಾಮಕ ಠಾಣೆಯ ಬಳಿ ವಾಹನವನ್ನು ನಿಲ್ಲಿಸಿದ್ದರು ಎಂದು ಹೇಳಲಾಗುತ್ತದೆ. ಅವರು ವ್ಯಾನ್ ಅನ್ನು ಬಳಸುತ್ತಿರಲಿಲ್ಲ.

ಮಲಯಾಳಂ ನಟ ಕಲಾಭವನ್ ನವಾಸ್ ಸಾವು: ಕೊಚ್ಚಿಯ ಹೊಟೇಲ್ ನಲ್ಲಿ ಶವವಾಗಿ ಪತ್ತೆ
ಸಮಯಕ್ಕೆ ತಮ್ಮ ಕೋಣೆಯಿಂದ ನಿರ್ಗಮಿಸದ ಕಾರಣ, ರೂಮ್ ಬಾಯ್ ಅವರು ಹೋಗಿ ನೋಡಿದಾಗ ನವಾಸ್ ಅವರು ಪ್ರಜ್ಞೆತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ದಾವಣಗೆರೆ: ನಾಪತ್ತೆಯಾಗಿದ್ದ ಪಿಯು ವಿದ್ಯಾರ್ಥಿಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.

ಬೆಂಗಳೂರು: ಫೆಬ್ರವರಿ 9ರಂದು ನಾಪತ್ತೆಯಾಗಿದ್ದ ಹೆಡ್ ಕಾನ್‌ಸ್ಟೆಬಲ್ ಶವ ಪತ್ತೆ
ಕಳೆದ ಏಳು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಬೆಳಗಾವಿ ಮೂಲದ ಸಿಕಂದರ್ ಕಾಣೆಯಾದ ದಿನವೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

