ಶಶಿಕಲಾ ಜೊಲ್ಲೆ

ಬೆಳಗಾವಿ: ಎರಡು ಪ್ರಭಾವಿ ರಾಜಕೀಯ ಕುಟುಂಬಗಳನ್ನು ಸಾರಸಗಟಾಗಿ ತಿರಸ್ಕರಿಸಿದ ತವರು ಕ್ಷೇತ್ರದ ಮತದಾರರು!
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬೆಳಗಾವಿ ಜಿಲ್ಲೆಯ ರಾಜಕೀಯವಾಗಿ ಬಲಿಷ್ಠ ಕುಟುಂಬಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮತದಾರರು ಸಹ ಈ ಅಭ್ಯರ್ಥಿಗಳ ಪರವಾಗಿಲ್ಲ ಎಂಬುದು ಸಾಬೀತಾಗಿದೆ.

ಚುನಾವಣಾ ಅಕ್ರಮ ಆರೋಪ: ಮಾಜಿ ಸಚಿವೆ ಶಶಿಕಲಾ ಜೊಲ್ಲೆಗೆ ಬಿಗ್ ರಿಲೀಫ್, ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಕಳೆದ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆಸಿದ ಆರೋಪದ ಮೇಲೆ ನಿಪ್ಪಾಣಿ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಕರ್ನಾಟಕದಲ್ಲಿ ಬರಗಾಲ: ಕೃಷ್ಣಾ-ಹಿರಣ್ಯಕೇಶಿ ನದಿಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಜೊಲ್ಲೆ ಮನವಿ
ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ನೀರು ಬಿಡುವಂತೆ ಸಂಸದ ಅಣ್ಣಾ ಸಾಹಿಬ್ ಶಂಕರ್ ಮನವಿ ಮಾಡಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ
ವಕ್ಫ್ ಮಂಡಳಿಯಿಂದ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ಮತ್ತು ಸಮಾಜದ ವಿವಿಧ ವರ್ಗಗಳಿಂದ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯುತ್ತದೆಯೇ ಎಂಬ ಅನುಮಾನ ದಟ್ಟವಾಗಿದೆ.

ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪಿಸಬೇಕೆಂಬ ಮನವಿಗೆ ಸಚಿವೆ ಶಶಿಕಲಾ ಜೊಲ್ಲೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ವಕ್ಫ್ ಬೋರ್ಡ್ ಅಧ್ಯಕ್ಷ ಶಾ ಸಅದಿ
ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಬಿಜೆಪಿ ಸರ್ಕಾರ ನಿರ್ಧರಿಸಿದ್ದು ಮುಂದಿನ ತಿಂಗಳು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ.

"ದಿವ್ಯ ಕಾಶಿ- ಭವ್ಯ ಕಾಶಿ" ದರ್ಶನ: ಮುಂದಿನ ತಿಂಗಳು 11 ರಿಂದ ರೈಲು ಪ್ರಾರಂಭ- ಶಶಿಕಲಾ ಜೊಲ್ಲೆ
ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ 5 ಸಾವಿರ ರೂ. ಸಹಾಯಧನದೊಂದಿಗೆ ರಾಜ್ಯದ ಭಕ್ತಾಧಿಗಳಿಗೆ ದಿವ್ಯ ಕಾಶಿ- ಭವ್ಯ ಕಾಶಿ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಂದಿನ ತಿಂಗಳು 11 ರಿಂದ ರೈಲು ಪ್ರಾರಂಭವಾಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ
ರಾಜ್ಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಬುಧವಾರ ಹೇಳಿದ್ದಾರೆ.

ಉತ್ತರ ಕರ್ನಾಟಕದ ಪ್ರಮುಖ ದೇವಸ್ಥಾನಗಳಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ
ಉತ್ತರ ಕರ್ನಾಟಕದ ಪ್ರಮುಖ ದೇವಸ್ಥಾನಗಳು ಹಾಗೂ ರಾಜ್ಯದಿಂದ ಹೆಚ್ಚು ಭಕ್ತರನ್ನ ಹೊಂದಿರುವ ದೇವಾಲಯಗಳಿಗೆ ಮುಜರಾಯಿ ಇಲಾಖೆಯ ವತಿಯಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ...

ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂ. ಅನುದಾನ ಬಿಡುಗಡೆ
2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಶನಿವಾರ ತಿಳಿಸಿದ್ದಾರೆ.

