ರಾಜ್ಯಕೊರೋನಾ ವೈರಸ್: ಶಾಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ
ಕೇಂದ್ರ ಮತ್ತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು(ಕೋವಿದ್ -19) ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಹಾಗೂ ನಿಯಂತ್ರಿಸುವ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಅರಿವು ಮೂಡಿಸಲು ರಾಜ್ಯದ ಶಾಲಾ- ಕಾಲೇಜುಗಳು ಕೆಲವು ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶಿಸಿದೆ.