ರಾಜ್ಯಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಾಲೆಗಳಿಗೆ ಶಿಕ್ಷಕರ ಭೌತಿಕ ಹಾಜರಿಗೆ ಸೂಚನೆ: ಸುರೇಶ್ ಕುಮಾರ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.