ರಾಜ್ಯಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರ ಸಾವು, ವರದಿ ನೀಡುವಂತೆ ಸುರೇಶ್ ಕುಮಾರ್ ಸೂಚನೆ
ಕೋವಿಡ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತು ಕೂಡಲೇ ಶಿಕ್ಷಕವಾರು ವರದಿಯನ್ನು ಮಂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.