ರಾಜಕೀಯಶಿಗ್ಗಾವಿ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.