ಶಿಲಾನ್ಯಾಸ

ಡಿಸಂಬರ್ 6 ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಬಾಬ್ರಿ ಮಸೀದಿಗೆ ಶಿಲಾನ್ಯಾಸ: TMC ಶಾಸಕ ಹೇಳಿಕೆ
ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದಿತ ರಚನೆಯನ್ನು ಡಿಸೆಂಬರ್ 6, 1992 ರಂದು ಕರಸೇವಕರು ಕೆಡವಿದರು.

ಕಲ್ಕಿಧಾಮ ಭಾರತೀಯ ನಂಬಿಕೆಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ
ಸಂಭಾಲ್ ಜಿಲ್ಲೆಯಲ್ಲಿ ಕಲ್ಕಿ ಧಾಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕಲ್ಕಿ ಧಾಮ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಉಪಸ್ಥಿತರಿದ್ದರು.

ಮುಂದಿನ ವರ್ಷ ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆ ಸಾಧ್ಯತೆ
ಅಯೋಧ್ಯೆಯಲ್ಲಿನ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಗೆ ಮುಂದಿನ ವರ್ಷ ಶಂಕುಸ್ಥಾಪನೆ ನೆರವೇರುವ ಸಾಧ್ಯತೆಯಿದ್ದು, ಸಮಾರಂಭಕ್ಕೆ ಸಾಧು ಸಂತರು, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳನ್ನು ಆಹ್ವಾನಿಸಲಾಗುವುದು ಎಂದು ಯೋಜನೆಗೆ ಸಂಬಂಧಿಸಿದವರು ಶುಕ್ರವಾರ ತಿಳಿಸಿದ್ದಾರೆ.

ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡದಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ವರ್ಚುವಲ್ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ನೆರವೇರಿಸಿದರು.

ವಿಶ್ವದ ಅತಿ ಎತ್ತರದ ಭಕ್ತಿ ಹನುಮಾನ್ ಮೂರ್ತಿ ನಿರ್ಮಾಣಕ್ಕೆ ಕಿಷ್ಕಿಂಧೆಯಲ್ಲಿ ಪೇಜಾವರ ಶ್ರೀಗಳಿಂದ ಶಿಲಾನ್ಯಾಸ
ವಿಶ್ವದ ಅತಿ ಎತ್ತರದ ಭಕ್ತಿ ಹನುಮಾನ್ ವಿಗ್ರಹ, ದೇವಾಲಯದ ನಿರ್ಮಾಣಕ್ಕೆ ನ.20 ರಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಶಿಲಾನ್ಯಾಸ ನೆರವೇರಿಸುವ ಐತಿಹಾಸಿಕ ಕಾರ್ಯಕ್ರಮ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದಲ್ಲಿ ನಡೆಯಿತು.

ಮಾಗಡಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಚಾಲನೆ
ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಬಾಗಲಕೋಟೆ: ಬಿಜೆಪಿ ಕಚೇರಿಗಿಂದು ಜೆಪಿ ನಡ್ಡಾ ಶಿಲಾನ್ಯಾಸ
ಬಾಗಲಕೋಟೆ ನವನಗರದ 22ನೇ ಸೆಕ್ಟರ್ ನಲ್ಲಿ ರೂ.3.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಜೆಪಿಯ ಜಿಲ್ಲಾ ಕಾರ್ಯಾಲಯದ ಕಟ್ಟಡದ ಶಿಲಾಫಲಕವನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ,ಪಿ.ನಡ್ಡಾ ಅವರು ಆನ್'ಲೈನ್ ಮೂಲಕ ಆ.14ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ.

'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಮೂಹೂರ್ತ ಫಿಕ್ಸ್ ಮಾಡಿದ್ದು ಕನ್ನಡಿಗ'
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಬೆಳಗಾವಿ ಕನ್ನಡಿಗ ವಿದ್ವಾಂಸ ಆರ್.ವಿಜಯೇಂದ್ರ ಶರ್ಮಾ ಮಹೂರ್ತ ಫಿಕ್ಸ್ ಮಾಡಿದ್ದಾರೆ. ಆಗಸ್ಟ್ 5ರಂದು ಅಯೋದ್ಯೆಯಲ್ಲಿ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದಾರೆ.

ವಿಶ್ವದಲ್ಲಿಯೇ ಅತಿ ಎತ್ತರದ ಏಕಶಿಲಾ ಯೇಸು ಪ್ರತಿಮೆಗೆ ಡಿಕೆ ಶಿವಕುಮಾರ್ ಶಿಲಾನ್ಯಾಸ
ಜಿಲ್ಲೆಯ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕ್ರಿಸ್ಮಸ್ ಶುಭದಿನವಾದ ಬುಧವಾರ ನೆರವೇರಿಸಿದರು

