ರಾಜ್ಯಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಪೋಕ್ಸೊ ಪ್ರಕರಣ ಮತ್ತು ಆ ಆರೋಪಕ್ಕೆ ಪೂರಕವಾಗಿ ವಿವಿಧ ಗುರುತರ ಅಪರಾಧಗಳ ಅಡಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.