ಶಿವಮೊಗ್ಗ

ವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ; ಸಿಎಂ ಶಿವಕುಮಾರ್ ತಿರುಗೇಟು!
ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕರು, ರೈತರು, ತಜ್ಞರ ಜೊತೆ ನೇರ ಸಂವಾದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡೇ ಚರಣ ಹಾಡಿದ್ದಕ್ಕೆ ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ: ವಂದೇ ಮಾತರಂ ಎರಡೇ ಚರಣ ಹಾಡೋದು ಸರೀನಾ?; ಸಿಎಂ ಮುಂದೆಯೇ BJP ಶಾಸಕ ಚನ್ನಬಸಪ್ಪ ಆಕ್ಷೇಪ; Video
ವೇದಿಕೆಯಿಂದ ಚನ್ನಬಸಪ್ಪ ಅವರು ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ಎತ್ತಗಂಡಿ!
ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳ ಬಿಜೆಪಿ ಶಾಸಕ ಚೆನ್ನಬಸಪ್ಪರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರನ್ನು ಬೇರೆಡೆಗೆ ಎತ್ತಂಗಡಿ ಮಾಡಲಾಗಿದೆ.

ಶಿವಮೊಗ್ಗ: 35 ಕೆಜಿ ಜಿಂಕೆ ಮಾಂಸ ಮಾರಾಟ; ಇಬ್ಬರು ಆರೋಪಿಗಳ ಬಂಧನ
ಅರಣ್ಯ ಸಂಚಾರಿ ದಳ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು; ರೌಡಿಶೀಟರ್ ಹತ್ಯೆ ಆರೋಪಿ cಪೊಲೀಸರ ಗುಂಡೇಟು..!
ಈ ವೇಳೆ ತುಂಗಾನಗರ ಠಾಣೆಯ ಇನ್‌ಸ್ಪೆಕ್ಟರ್ ಗುರುರಾಜ್ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಶಿವಮೊಗ್ಗ: ಕೆರೆಗೆ ಧುಮುಕಿ ಕಳೆಗಳಡಿ ಅಡಗಿದ್ದ ರೌಡಿ ಶೀಟರ್ ಹಿಡಿದ ಪೊಲೀಸರು; Video
ಬಂಧಿತನನ್ನು ಭದ್ರಾವತಿ ನಿವಾಸಿ ದಿಲೀಪ್ ಅಲಿಯಾಸ್ ಕರಿಯ (19ವ) ಎಂದು ಗುರುತಿಸಲಾಗಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬಹುಕಾಲದಿಂದ ತಲೆಮರೆಸಿಕೊಂಡಿದ್ದ ಆತ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ.

ಶಿವಮೊಗ್ಗ: ಈದ್ ಮಿಲಾದ್ ಗೆ ಕಟೌಟ್ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಾಟ; ಮೂವರ ವಿರುದ್ಧ ಕೇಸು ದಾಖಲು; Video
ಎಫ್‌ಐಆರ್ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಅವರು ಕಟೌಟ್ ಮೇಲೇರಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿ, ಕೃತ್ಯವನ್ನು ವಿಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಬಳಿಕ ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಬೈಲ್ ಗಿಫ್ಟ್ ಕೊಟ್ಟು ಬ್ಲ್ಯಾಕ್‌ಮೇಲ್; ಪಾಗಲ್ ಪ್ರೇಮಿಯ ಕಾಟಕ್ಕೆ ಶಿವಮೊಗ್ಗದಲ್ಲಿ ಕಾಲೇಜು ವಿದ್ಯಾರ್ಥಿನಿ ಬಲಿ; ಆರೋಪಿ ಸುಮುಖ್ ವಶಕ್ಕೆ
ಪ್ರೀತಿ ಎಂಬ ಮುಖವಾಡದ ಹಿಂದೆ ಅಡಗಿದ್ದ ವಿಕೃತಿಯೊಂದು ಮುಗ್ಧ ಬಾಲಕಿಯ ಜೀವವನ್ನೇ ಬಲಿಪಡೆದಿದೆ. ಕಾಲೇಜು ಮೆಟ್ಟಿಲೇರಿ ಕನಸುಗಳನ್ನು ಕಟ್ಟಿಕೊಳ್ಳುತ್ತಿದ್ದ ಯುವತಿಯೊಬ್ಬಳು ಬ್ಲ್ಯಾಕ್‌ಮೇಲ್ ಹಾಗೂ ನಿರಂತರ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯ ಕಂಡಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ: ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ; ಇಬ್ಬರು ಬಾಲಕಿಯರ ಪತ್ತೆಗೆ ಮುಂದುವರಿದ ಶೋಧ ಕಾರ್ಯ!
ಚಿತ್ರದುರ್ಗ ಜಿಲ್ಲೆಯ ಹೊಸೂರು ಗ್ರಾಮದ ನಿವಾಸಿಯಾದ ಭವಾನಿ, ಮೊದಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ನದಿಗೆ ತಳ್ಳಿದ ನಂತರ, ತನ್ನ ಮಗನೊಂದಿಗೆ ತಾನೂ ನದಿಗೆ ಹಾರಿದ್ದಾರೆ.

