ಶಿವಮೊಗ್ಗ ವಿಮಾನ ನಿಲ್ದಾಣ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತರಬೇತಿ ಸಂಸ್ಥೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದು..!
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಅಧೀನದ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. ಇದೇ ಸಂಸ್ಥೆ ಈಗ ವೈಮಾನಿಕ ತರಬೇತಿ ಸಂಸ್ಥೆ ಆರಂಭಿಸಲು ಟೆಂಡರ್ ಆಹ್ವಾನಿಸಿದೆ.

ಆಗಸ್ಟ್ 15 ರಿಂದ ಶಿವಮೊಗ್ಗ-ಚೆನ್ನೈಗೆ ವಿಮಾನ ಹಾರಾಟ ಆರಂಭ
ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೂ ಸ್ಪೈಸ್ ಜೆಟ್ ಹಾರಾಟ ನಡೆಸಲಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಮಧ್ಯ ಕರ್ನಾಟಕದ ಪ್ರಮುಖ ನಿಲ್ದಾಣ ಆಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗುರುವಾರದಿಂದ ವಿಮಾನಯಾನ ಸೇವೆ ಆರಂಭ: ಎಂಬಿ ಪಾಟೀಲ್
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರಕ್ಕೇರಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ: ವಿಮಾನ ಹಾರಾಟ ಆಗಸ್ಟ್ 31 ರಿಂದ ಆರಂಭ
ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು, ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಸಜ್ಜು; ಆಗಸ್ಟ್ 11 ರಿಂದ ವಿಮಾನ ಹಾರಾಟ: ಎಂ.ಬಿ.ಪಾಟೀಲ್
ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ: ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಂದು ವಿಮಾನ ಹಾರಾಟ ಆರಂಭವಾಗಲಿದ್ದು, ಮೊದಲ ವಿಮಾನ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

'ಇಂದು ಮರೆಯಲಾಗದ ಶುಭದಿನ, ಸಿಎಂ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ, ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು': ಬಿ ಎಸ್ ಯಡಿಯೂರಪ್ಪ
ಇಂದು ಸೋಮವಾರ ಫೆಬ್ರವರಿ 27 ಮಾಜಿ ಮುಖ್ಯಮಂತ್ರಿ ಬಿಜೆಪಿಯ ಪ್ರಬಲ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪನವರ 80ನೇ ಹುಟ್ಟುಹಬ್ಬ. ಇಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದು ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ.

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕಲರವ: 'ರಾಜಾಹುಲಿ' ಹುಟ್ಟುಹಬ್ಬಕ್ಕೆ ವಿಶೇಷ ಕೊಡುಗೆ
ರಾಜಾಹುಲಿ ಎಂದು ಮಾಧ್ಯಮಗಳಿಂದ, ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ 80ನೇ ವರ್ಷದ ಹುಟ್ಟುಹಬ್ಬ ಇಂದು. ಅವರ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಅವರಿಗೆ ರಾಜಕೀಯ ಬದುಕು ನೀಡಿದ ಶಿವಮೊಗ್ಗ ಜಿಲ್ಲೆಯ ಕೇಂದ್ರ ಸ್ಥಾನ ಶಿವಮೊಗ್ಗ ಏರ್ ಪೋರ್ಟ್ ಇಂದು ಸೋಮವಾರ ಲೋಕಾರ್ಪಣೆಗೊಳ್ಳುತ್ತಿದೆ.

ಪ್ರಧಾನಿ ಮೋದಿ ಉದ್ಘಾಟನೆಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟ
ಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಲಿದ್ದು, ಈ ನಡುವಲ್ಲೇ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮೊದಲ ವಿಮಾನ ಪರೀಕ್ಷಾರ್ಥ ಹಾರಾಟ ನಡೆಸಿದ್ದು, ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ.

