ರಾಜ್ಯಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆಗೆ ಆದೇಶ ಹೊರಡಿಸಿರುವುದಾಗಿ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ನಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, ಜನತೆ ಈ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಹೇಳಿದ್ದಾರೆ.