ದೇಶಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ, ಡಿಸೆಂಬರ್ನಲ್ಲಿ ಮೊದಲ ಅಗ್ನಿವೀರರಿಗೆ ತರಬೇತಿ: ಸೇನಾ ಮುಖ್ಯಸ್ಥ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.