ದೇಶಶೀನಾ ಬೋರಾ ಹತ್ಯೆ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ
ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಧಾನ ಆರೋಪಿ ಇಂದ್ರಾಣಿ ಮುಖರ್ಜಿ ಸಲ್ಲಿಸಿದ್ದ ಜಾಮೀನು ಕೋರಿಕೆ ಅರ್ಜಿಯನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ತಿರಸ್ಕರಿಸಿದೆ. ಆರೋಪಿ ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.