ಶೇ.40 ಕಮಿಷನ್ ಆರೋಪ

ನ್ಯಾ.ನಾಗಮೋಹನ್ ದಾಸ್ ಆಯೋಗದ ತನಿಖೆ ಪೂರ್ಣಗೊಂಡ ಬಳಿಕ ಶೇ.40 ಕಮಿಷನ್ ಸತ್ಯಾಸತ್ಯತೆ ಬಯಲಿಗೆ ಬರಲಿದೆ: ಸಚಿವ ಪ್ರಿಯಾಂಕ್ ಖರ್ಗೆ
ಶೇ.40 ಕಮಿಷನ್ ಆರೋಪ ನಿರಾಧಾರ ಎಂದು ಲೋಕಾಯುಕ್ತ ಕ್ಲೀನ್ ಚಿಟ್ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 40 ಶೇ.40 ಕಮಿಷನ್ ಆರೋಪ ನಿರಾಧಾರ ಆದರೆ ನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಕ್ರಮಕ್ಕೆ ಯಾಕೆ ಸೂಚಿಸಿದೆ? ಎಂದು ಪ್ರಶ್ನಿಸಿದರು.

40 ಪರ್ಸೆಂಟ್ ಕಮಿಷನ್ ಜಾಹೀರಾತು: ಸಿದ್ದು, ಡಿಕೆಶಿಗೆ ಸಮನ್ಸ್ ಮರು ಜಾರಿ; ರಾಹುಲ್‌ಗೆ ಜೂನ್ 1ರವರೆಗೆ ವಿನಾಯಿತಿ
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಮಾನಹಾನಿ ಮಾಡಿದೆ...

ಶೇ.40 ಕಮಿಷನ್ ಆರೋಪ: ತನಿಖೆ ವಿಳಂಬವಾಗುತ್ತಿರುವುದೇಕೆ: ಸಿಎಂ ಸಿದ್ದರಾಮಯ್ಯಗೆ ಬೊಮ್ಮಾಯಿ ಪ್ರಶ್ನೆ
ಶೇ 40ರಷ್ಟು ಕಮಿಷನ್ ಅವ್ಯವಹಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶೀಘ್ರಗತಿಯಲ್ಲಿ ತನಿಖೆ ಪೂರ್ಣಗೊಳಿಸಬೇಕು ಎಂದು ಬುಧವಾರ ಒತ್ತಾಯಿಸಿದರು.

ಶೇ.40 ಕಮಿಷನ್ ಆರೋಪ: ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತೆ 6 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್
ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಆಯೋಗಕ್ಕೆ ವರದಿ ಸಲ್ಲಿಸಲು ಹೈಕೋರ್ಟ್ ಮತ್ತೆ ಆರು ವಾರಗಳ ಗಡುವು ನೀಡಿ ಆದೇಶಿಸಿದೆ.

ಶೇ.40 ಕಮಿಷನ್ ಹಗರಣ ಕುರಿತು ನ್ಯಾಯಾಂಗ ತನಿಖೆ: ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಪಡೆಯುತ್ತಿದ್ದ ಆರೋಪ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ: ದಾಖಲೆ ನೀಡುವಂತೆ ಗುತ್ತಿಗೆದಾರರ ಸಂಘಕ್ಕೆ ಕೇಂದ್ರ ಸರ್ಕಾರ ಸೂಚನೆ
ಯೋಜನೆ ಮಂಜೂರಾತಿ ಪಡೆಯಲು ಶೇ 40ರಷ್ಟು ಕಮಿಷನ್ ನೀಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಣಗಣಿಸಿರುವ ಕೇಂದ್ರ ಸರ್ಕಾರವು, ಈ ಸಂಬಂಧ ದಾಖಲೆಗಳನ್ನು ನೀಡುವಂತೆ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಸೂಚನೆ ನೀಡಿದೆ.

