ದೇಶರಾಮಮಂದಿರ: ಜ. 22 ರಂದು ಮಧ್ಯಾಹ್ನ ರಾಮ ಪ್ರಾಣ ಪ್ರತಿಷ್ಠಾಪನೆ, 20, 21ರಂದು ದರ್ಶನವಿಲ್ಲ!
ದೇಶಾದ್ಯಂತ ತೀವ್ರ ಕುತೂಹಲದಿಂದ ಎದುರು ನೋಡುತ್ತಿರುವ ಅಯೋಧ್ಯೆಯ ರಾಮಮಂದಿರದ ಗರ್ಭ ಗೃಹದಲ್ಲಿ ಜನವರಿ 18 ರಂದು ಶ್ರೀರಾಮನ ವಿಗ್ರಹವನ್ನು ಇಡಲಾಗುವುದು, ಜನವರಿ 22 ರಂದು 12-30ಕ್ಕೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೋಮವಾರ ತಿಳಿಸಿದರು.