ರಾಜ್ಯಜ. 22ರಂದು ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ, ನಂತರ ಭಕ್ತರ ಭೇಟಿಗೆ ಅವಕಾಶ: ಪೇಜಾವರ ಶ್ರೀಗಳು
ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಜನವರಿ 22ರಂದು ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಒಂದು ದಿನದ ನಂತರ ಭಕ್ತರು ಭೇಟಿ ನೀಡಲು ಸಾಧ್ಯವಾಗುತ್ತದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಮತ್ತು ಉಡುಪಿ ಪೇಜಾವರ ಮಠದ ಮುಖ್ಯಸ್ಥ ಶ್ರೀ ವಿಶ್ವಪ್ರಸನ್ನ ತೀರ್ಥರು ಗುರುವಾರ ಹೇಳಿದರು.