ದೇಶಶ್ರೀಲಂಕಾದಿಂದ ಬಂದ ನಾಲ್ವರು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಬಂಧಿಸಿದ ಗುಜರಾತ್ ಎಟಿಎಸ್
ಅಹಮದಾಬಾದ್ನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್ನ ಭಯೋತ್ಪಾದಕರು ಎಂದು ಹೇಳಿದೆ.