ರಾಜ್ಯಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಿಲೀಫ್: ದೇವರ ಆಶೀರ್ವಾದ ಎಂದ ಕೆಎಸ್ ಈಶ್ವರಪ್ಪ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ನಮ್ಮ ಕುಲದೇವತೆ ಚೌಡೇಶ್ವರಿಯ ಆಶೀರ್ವಾದದಿಂದ ನಾನು ನ್ಯಾಯಾಲಯದಲ್ಲಿ ನಿರಪರಾಧಿ ಎಂದು ಸಾಬೀತಾಗಿದೆ ಎಂದರು.