ಸಂಪುಟ ರಚನೆ

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ
ಸರ್ಕಾರ ರಚನೆ ಕುರಿತು ಚರ್ಚೆಗಳು ನಡೆಯುತ್ತಿವೆ, ಆದರೆ ಯಾವುದೇ ಔಪಚಾರಿಕ ಪ್ರಸ್ತಾವನೆ ಪಕ್ಷದ ಹೈಕಮಾಂಡ್‌ಗೆ ತಲುಪಿಲ್ಲ ಎಂದು ಹೇಳಿದರು. ಸಚಿವರ ನೇಮಕದ ಕುರಿತು ಯಾವುದೇ ಪ್ರಸ್ತಾವನೆ ಇನ್ನೂ ಬಂದಿಲ್ಲ.

ಸಿದ್ದರಾಮಯ್ಯ ಸಂಪುಟ ಸಂಪೂರ್ಣ ಭರ್ತಿ: ಶೆಟ್ಟರ್, ಸವದಿ ಔಟ್; ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?
ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಇಂದು 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಪುಟ ರಚನೆ ಮುಗಿದ ನಂತರ ಸಿಎಂ ಬೊಮ್ಮಾಯಿಗೆ ಮತ್ತಷ್ಟು ಸಮಸ್ಯೆ, ಅತೃಪ್ತರ, ಭಿನ್ನರ ಸಂಖ್ಯೆಯಲ್ಲಿ ಹೆಚ್ಚಳ!
ರಾಜ್ಯ ಸಚಿವ ಸಂಪುಟ ರಚನೆಯಾಗಿ ಒಂದು ವಾರವಾಗಿದೆ. ಆದರೆ ಅತೃಪ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. ಇನ್ನು ಸಚಿವ ಸ್ಥಾನ ಸಿಕ್ಕಿದವರಲ್ಲಿ ಕೆಲವರಿಗೆ ಖಾತೆ ಬಗ್ಗೆ ಅತೃಪ್ತಿಯುಂಟಾಗಿದ್ದು ವಿವಿಧ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಿತ್ತು: ಸತೀಶ್ ಜಾರಕಿಹೊಳಿ
ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಬಸವರಾಜ ಸಂಪುಟ ಸೇರುವ ನೂತನ ಸಚಿವರು ಇವರು; ಮಧ್ಯಾಹ್ನ ಪ್ರಮಾಣ ವಚನ; ಬಿಎಸ್ ವೈ ಪುತ್ರ ವಿಜಯೇಂದ್ರಗೆ ಸ್ಥಾನ ಇಲ್ಲ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ ಇಂತಿದೆ:

ನೂತನ ಸಚಿವರ ಪಟ್ಟಿ ಬೆಳಗ್ಗೆ 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ ಬಿಡುಗಡೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಪುಟ ರಚನೆ: ದಿಢೀರ್ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ ಭೇಟಿ ಬಳಿಕ ಸಚಿವರ ಪಟ್ಟಿ ಅಂತಿಮ ಸಾಧ್ಯತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ತಡರಾತ್ರಿ ದಿಢೀರ್ ದೆಹಲಿಗೆ ಭೇಟಿ ನೀಡಿದ್ದು, ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿಯಾಗಿ ಸಚಿವ ಸಂಪುಟ ಅಂತಿಮಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಂಪುಟ ರಚನೆ ಕುರಿತು ಯತ್ನಾಳ್ ಬೆದರಿಕೆ ಹಾಕಬಾರದು: ಕೆ.ಎಸ್.ಈಶ್ವರಪ್ಪ
ವಿಜಯಪುರದ ಜಿಲ್ಲೆಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ, ಬಿಜೆಪಿ ಸರ್ವನಾಶವಾಗುತ್ತದೆ ಎಂಬ ಬೆದರಿಕೆಯ ಹೇಳಿಕೆಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ನೀಡುವುದು ಸರಿಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಮೂಲ ಬಿಜೆಪಿಗರು ಹಾಲಿದ್ದಂತೆ, ಹೊರಗಿನಿಂದ ಬಂದವರು ಜೇನಿದ್ದಂತೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಕೆ ಎಸ್ ಈಶ್ವರಪ್ಪ
ರಾಜ್ಯದ ಬಿಜೆಪಿ ನಾಯಕರಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ, ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರದ ನಾಯಕರು ರಾಜ್ಯಕ್ಕೆ ಬಂದು ಅಸಮಾಧಾನ ಏನೇನಿದೆ ಎಂದು ತಿಳಿದುಕೊಂಡು ನಾಯಕರನ್ನು ಕರೆದು ಕೂರಿಸಿ ಚರ್ಚೆ ಮಾಡಿ ಬಗೆಹರಿಸುತ್ತಾರೆ. ಇಲ್ಲಿ ವಲಸಿಗರು, ಮೂಲದಿಂದಲೇ ಇರುವವರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹಿರಿಯ ನಾಯಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾ

