ದೇಶಕೇಂದ್ರ ಸಚಿವ ಸಂಪುಟ ವಿಸ್ತರಣೆ ವದಂತಿ: ಸಂಪುಟದ ಹಿರಿಯ ಸಚಿವರುಗಳ ಜೊತೆಗಿನ ಪ್ರಧಾನಿ ಮೋದಿ ಸಭೆ ರದ್ದು
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಕಳೆದ ಕೆಲ ದಿನಗಳಿಂದ ಕೇಳಿಬರುತ್ತಿರುವ ವದಂತಿಗಳ ಮಧ್ಯೆ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ.