ಸಕ್ಕರೆ ಕಾರ್ಖಾನೆ
ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಕಬ್ಬಿನ ರಸವನ್ನು ಕುದಿಸಲು ಬಳಸುವ 40 ಅಡಿ ಎತ್ತರದ ಪಾತ್ರೆಯಾದ AVCP ನಂ. 1 ರ ದುರಸ್ತಿ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಕಬ್ಬಿನ ಬೆಲೆ ಏರಿಕೆ ಮಾಡುವ ಸರ್ಕಾರದ ನಿರ್ಧಾರವನ್ನು ಸಕ್ಕರೆ ಕಾರ್ಖಾನೆಗಳು ಒಪ್ಪಿಕೊಳ್ಳುತ್ತವೆ: ಸಿಎಂ ಸಿದ್ದರಾಮಯ್ಯ
ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ಕಡೆಯಿಂದ ರೈತರಿಗೆ ಪ್ರತಿ ಟನ್‌ಗೆ 50 ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕು, ಸರ್ಕಾರವು ಸಬ್ಸಿಡಿಯಾಗಿ 50 ರೂ.ಗಳನ್ನು ಪಾವತಿಸುತ್ತದೆ.

ಚುನಾವಣೆಗಾಗಿ ಪ್ರತಿ ಸಕ್ಕರೆ ಕಾರ್ಖಾನೆಯಿಂದ 50 ಲಕ್ಷ ರೂ. ವಸೂಲಿ: ಸಚಿವರ ವಿರುದ್ಧ ಯತ್ನಾಳ್ ಆರೋಪ
ತೂಕದ ಯಂತ್ರದ ಬಗ್ಗೆ ಸಚಿವರು ವಿಧಾನಸಭೆಯಲ್ಲೇ ಹೇಳಿದ್ದರು. ಆದರೆ, ಈಗ ಅವರ ಪುತ್ರಿ ಚುನಾವಣೆಗೆ ನಿಂತಿರುವ ಕಾರಣ ಮಾತು ಬದಲಿಸಿ, ಕಾರ್ಖಾನೆಗಳಿಂದ 50 ಲಕ್ಷ ವಸೂಲಿ ಮಾಡುತ್ತಿದ್ದಾರೆ.

ಶರದ್ ಪವಾರ್ ಮೊಮ್ಮಗನ ಸಕ್ಕರೆ ಕಾರ್ಖಾನೆ ಜಪ್ತಿ ಮಾಡಿದ ಇಡಿ
ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಮೊಮ್ಮಗ ರೋಹಿತ್ ಪವಾರ್ ಒಡೆತನದ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ 50 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ.

ಯತ್ನಾಳ್ ಸಕ್ಕರೆ ಕಾರ್ಖಾನೆ ಬಂದ್: ಕ್ರಮ ಸಮರ್ಥಿಸಿಕೊಂಡ ಸಚಿವ ಈಶ್ವರ್ ಖಂಡ್ರೆ
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಕ್ಕರೆ ಕಾರ್ಖಾನೆಯನ್ನು ಬಂದ್ ಮಾಡಿಸುವ ಕುರಿತ ಸರ್ಕಾರದ ವಿರುದ್ಧದ ಕ್ರಮವನ್ನು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ
ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ.

ಹಾವೇರಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ರ ಸಕ್ಕರೆ ಕಾರ್ಖಾನೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ: ಸಚಿವ ಶಂಕರ ಪಾಟೀಲ
ರಾಜ್ಯದ 34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ. ಕಾರ್ಖಾನೆಗಳು ಇಂತಹ ಉಪ ಉತ್ಪನ್ನಗಳಿಂದ ಬರುವ ಲಾಭದ ಶೇಕಡವಾರು ಮೊತ್ತವನ್ನು ಕಬ್ಬು ರೈತರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಂಗಳವಾರ ಹೇಳಿದರು.

ಕಬ್ಬಿನ ತೂಕದಲ್ಲಿ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ
ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿನ್ನೆ ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ.

