ರಾಜಕೀಯಅಲಿಖಿತ ನಿಯಮ 75 ವರ್ಷ ದಾಟಿದವರಿಗೂ ಅನ್ವಯಿಸುತ್ತೆ: ಪರೋಕ್ಷವಾಗಿ ಸಿಎಂ ಯಡಿಯೂರಪ್ಪಗೆ ಸಿಟಿ ರವಿ ಟಾಂಗ್
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸಚಿವರು ತಮ್ಮ ವರಸೆ ಬದಲಿಸಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.