ರಾಜ್ಯಪಿಓಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಈಶ್ವರ ಖಂಡ್ರೆ ಸೂಚನೆ
ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.