ರಾಜಕೀಯಮಂಡ್ಯದಲ್ಲಿ ಸಚಿವ ನಾರಾಯಣಗೌಡರಿಂದ ದ್ವೇಷ ರಾಜಕಾರಣ: ಸಿಎಂ ಮನೆ ಮುಂದೆ ಧರಣಿಗೆ ದೇವೇಗೌಡ ನಿರ್ಧಾರ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ರಾಜಕೀಯ ದ್ವೇಷ, ವೈರತ್ವ, ಹಗೆತನ ಮತ್ತು ದುರುದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಕಿರುಕುಳ, ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.