ರಾಜಕೀಯವಿಧಾನ ಪರಿಷತ್ ಚುನಾವಣೆ: ಡಿಕೆಶಿ ಭೇಟಿಯಾದ ಸಚಿವರ ನಿಯೋಗ; ಲಂಬಾಣಿಗರು, ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವಂತೆ ಮನವಿ
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಜಾತಿ, ಪ್ರದೇಶ, ಕೊಡುಗೆಗಳನ್ನು ಮಾನದಂಡವಾಗಿ ಪರಿಗಣಿಸುವಂತೆ ಸಚಿವರ ನಿಯೋಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ, ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು.