ದೇಶಸನಾತನ ನಿರ್ಮೂಲನೆ: ನನ್ನ ಹೇಳಿಕೆಗೆ ಬದ್ಧ, ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ: ಉದಯನಿಧಿ ಸ್ಟಾಲಿನ್
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್, ನಾನು ನನ್ನ ಹೇಳಿಕೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.