ರಾಜ್ಯಬಾಗ್ಮನೆ ಒತ್ತುವರಿ: ಲೋಕಾಯುಕ್ತ ಮಧ್ಯಪ್ರವೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಸಮಾಜ ಪರಿವರ್ತನಾ ಸಮುದಾಯ
ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಬಾಗ್ಮನೆ ಡೆವಲಪ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಚಾರಣೆ ಕೈಗೊಂಡಿರುವ ಕರ್ನಾಟಕ ಲೋಕಾಯುಕ್ತ ಕಾನೂನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದೆ.