ದೇಶನಾವು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶದಲ್ಲಿ ಮೊಘಲ್ ಆಡಳಿತ ಬರುವ ದಿನಗಳು ದೂರವಿಲ್ಲ: ಸಂಸದ ತೇಜಸ್ವಿ ಸೂರ್ಯ
ಇಂದು ದೇಶದ ಬಹುತೇಕ ಸಮುದಾಯಗಳು ಎಚ್ಚರಿಕೆಯಿಂದಿರಬೇಕು, ಇಲ್ಲದಿದ್ದರೆ ಮೊಘಲ್ ಆಡಳಿತ ದೇಶಕ್ಕೆ ಮರಳುವುದಕ್ಕೆ ಹೆಚ್ಚು ಸಮಯವಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಅವರು ಶಹೀನಾ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯನ್ನುದ್ದೇಶಿಸಿ ಈ ಮಾತುಗಳನ್ನು ಆಡಿದ್ದಾರೆ.