ಸರ್ವೆ ಸೂಪರ್ ವೈಸರ್

ಲೋಕಾಯುಕ್ತ ದಾಳಿ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆ ; ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿ ಬಂಧನ
ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು, ಈ ವೇಳೆ 3 ಕೋಟಿಗೂ ಅಧಿಕ ಆಸ್ತಿ ಪತ್ತೆಯಾಗಿದೆ. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ಶ್ರೀನಿವಾಸಮೂರ್ತಿ ಬಂಧನವಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ: ಬೆಂಗಳೂರಿನ ಕೆ.ಆರ್.ಪುರಂ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ್ ಮೂರ್ತಿ ಲೋಕಾಯುಕ್ತ ಬಲೆಗೆ
ನಗರದ ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ಕೆ ಆರ್ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ ಮೂರ್ತಿಯವರ ಹಲವು ಮನೆಗಳ ಮೇಲೆ ದಾಳಿ ನಡೆಸಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

