ಸಿನಿಮಾ ಸುದ್ದಿಪ್ರಭಾಸ್ ಅಭಿನಯದ ಸಲಾರ್ 2 ನಿರ್ಮಾಣ ಕಾರ್ಯಕ್ಕೆ ವೇಗ; ಶೀಘ್ರದಲ್ಲೇ ಚಿತ್ರೀಕರಣ ಆರಂಭ
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಭಾಗ 1: ಕದನ ವಿರಾಮ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿತು. ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ಇದೀಗ ಒಟಿಟಿ ವೇದಿಕೆಗಳ ಮೂಲಕ ಪ್ರೇಕ್ಷಕರಿಗೆ ಲಭ್ಯವಾಗಿದೆ.