ದೇಶನಿತೀಶ್ ಸರ್ಕಾರ ಕೋವಿಡ್-19 ಅನ್ನು ಸಮರ್ಥವಾಗಿ ಎದುರಿಸಿದೆ, ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಪ್ರಧಾನಿ ಮೋದಿ
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಸಮಯಕ್ಕೆ ಸರಿಯಾಗಿ ಕಾರ್ಯಪ್ರವೃತ್ತವಾಗಿರದಿದ್ದಿದ್ದರೆ ರಾಜ್ಯದಲ್ಲಿ ಕೊರೋನಾದಿಂದ ಇನ್ನಷ್ಟು ನಾಗರಿಕರು ಮೃತಪಡುತ್ತಿದ್ದರು, ಊಹಿಸಲು ಸಾಧ್ಯವಿಲ್ಲದಷ್ಟು ತೊಂದರೆ, ಪ್ರಾಣಹಾನಿ, ಆರೋಗ್ಯ ಸಮಸ್ಯೆಯುಂಟಾಗುತ್ತಿತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.