ಸಾಂಸ್ಥಿಕ ಕ್ವಾರಂಟೈನ್

ವಿದೇಶದಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್'ಗೊಳಪಡಿಸುವುದು ಅಗತ್ಯವಿದೆ: ಗೌರವ್ ಗುಪ್ತಾ
ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಓಮಿಕ್ರಾನ್ ಭೀತಿ: ಬೆಂಗಳೂರಿಗೆ ಆಗಮಿಸುವವರಿಗೆ ಶೀಘ್ರ ಸಾಂಸ್ಥಿಕ ಕ್ವಾರಂಟೈನ್; ಕೋವಿಡ್ ಪರೀಕ್ಷಾ ದರಗಳ ಮೇಲೆ ಮಿತಿ!
ನಗರದಲ್ಲಿ ಓಮಿಕ್ರಾನ್ ಭೀತಿ ಹೆಚ್ಚಾಗಿರುವಂತೆಯೇ ಇತ್ತ ಬೆಂಗಳೂರಿಗೆ ಆಗಮಿಸುವ ವಿದೇಶಿಗರಿಗೆ ಶೀಘ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆಯಲ್ಲಿದೆ.

ಕೇರಳದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೇರಳದಿಂದ ಬರುವವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್: ಆರೋಗ್ಯ ಸಚಿವ ಸುಧಾಕರ್
ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ಬ್ರಿಟನ್‌ನಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ರಾಜ್ಯಗಳಿಗೆ ಕೇಂದ್ರದ ಸೂಚನೆ
ಬ್ರಿಟನ್‌ನಿಂದ ಸ್ವದೇಶಕ್ಕೆ ಮರಳುತ್ತಿರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮನೆಯಲ್ಲಿರಿ, ಇಲ್ಲವೇ ಸಾಂಸ್ಥಿಕ ಕ್ವಾರಂಟೈನ್ ಎದುರಿಸಿ: 60 ವರ್ಷ ಮೇಲ್ಪಟ್ಟವರಿಗೆ ಜಿಲ್ಲಾ ಆಡಳಿತ ಮಂಡಳಿ ಎಚ್ಚರಿಕೆ
ಕೊರೋನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿರುವಂತೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ಅನಗತ್ಯ ಓಡಾಟಗಳನ್ನು ನಿಲ್ಲಿಸುತ್ತಿಲ್ಲ.

ದೆಹಲಿಗೆ ಬರುವವರಿಗೆ 5 ದಿನ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶ ಹಿಂಪಡೆದ ಲೆಫ್ಟಿನೆಂಟ್ ಗವರ್ನರ್
ದೆಹಲಿಯ ಆಪ್ ಸರ್ಕಾರದ ತೀವ್ರ ವಿರೋಧದ ನಂತರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಕೋವಿಡ್-19 ರೋಗಿಗಳಿಗೆ 5 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.

ದೆಹಲಿಗೆ ಬರುವವರಿಗೆ 5 ದಿನ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್: ಲೆಫ್ಟಿನೆಂಟ್ ಗವರ್ನರ್ ನಿರ್ಧಾರಕ್ಕೆ ಸಿಎಂ ಕೇಜ್ರಿವಾಲ್ ವಿರೋಧ
ಕ್ವಾರಂಟೈನ್ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಜೈಜಾಲ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ಜಟಾಪಟಿ ಆರಂಭವಾಗಿದೆ.

ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ: ಶ್ರೀರಾಮುಲು
ಇನ್ನು ಮುಂದೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನೆಲ್ಲ ಅವರವರ ಮನೆಯಲ್ಲೇ 14 ದಿನ ಕ್ವಾರಂಟೈನ್, ಸೀಲ್'ಡೌನ್ ಮಾಡಲಾಗುವುದು. ಈ ಅವಧಿಯಲ್ಲಿ ಅವರಲ್ಲಿ ಕೊರೋನಾ ಲಕ್ಷಣಗಳು ಕಂಡು ಬಂದರೆ ಮಾತ್ರ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುವುದು.

