ದೇಶನಿಮ್ಮ ಸಾಮಾಜಿಕ ಮಾಧ್ಯಮ ನಿರ್ವಹಣಾ ಅವಕಾಶ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ನೀಡಿ: ಮೋದಿಗೆ ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 8ರಂದು ವಿಶ್ವ ಮಹಿಳಾ ದಿನದ ಅಂಗವಾಗಿ ತಮ್ಮ ಸಾಮಾಜಿಕ ಜಾಲತಾಣಗಳ ನಿರ್ವಹಣೆಯ ಅಧಿಕಾರವನ್ನು ಜನರಿಗೆ ಸ್ಪೂರ್ತಿ ಮತ್ತು ಉತ್ತೇಜನ ನೀಡುವ ಮಹಿಳೆಗೆ ನೀಡುವುದಾಗಿ ಹೇಳಿದ ನಂತರ, ನಿಮ್ಮ ಸಾಮಾಜಿಕ ಮಾಧ್ಯಮಗಳ ನಿರ್ವಹಣಾ ಅವಕಾಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ನೀಡುವಂತೆ ಪ್ರಧಾನಿಗೆ ಕಾಂಗ್ರೆಸ್ ಸಲಹೆ ನೀಡಿದೆ.