ರಾಜ್ಯವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕರಿಗೆ 1 ಗಂಟೆ ಮಾತ್ರ ಪ್ರವೇಶ: ವಿಜಯ್ ಭಾಸ್ಕರ್
ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸಲಾಗಿದ್ದು, ಸಂಜೆ ಎರಡು ಗಂಟೆ ಬದಲು ಒಂದು ಗಂಟೆ ಮಾತ್ರ ಜನ ಸಾಮಾನ್ಯರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಹೇಳಿದ್ದಾರೆ.