ದೇಶಮಧ್ಯಪ್ರದೇಶ: ಕೋವಿಡ್ ನಲ್ಲಿ ಮೃತಪಟ್ಟ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್!
ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್ ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ.