ರಾಜ್ಯಸಾಹಿತಿ ಬರಹಗಾರರ ವಿರುದ್ಧದ ಸುಳ್ಳು ಮೊಕದ್ದಮೆ ವಾಪಸ್, ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಗಳಿಗೆ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ
ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.