ಸಿಎಂ ಪತ್ನಿ

ರಾಜಕೀಯ ಪಿತೂರಿಯಿಂದ ED ನೋಟೀಸ್; ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು: ಡಿ.ಕೆ ಶಿವಕುಮಾರ್
ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ.

ಮುಡಾ ಸೈಟ್ ವಾಪಸ್: ಸಿಎಂ ಪತ್ನಿ ಪಾರ್ವತಿ ಭಾವುಕ ಪತ್ರ; ಮಹತ್ವದ ನಿರ್ಧಾರಕ್ಕೂ ಮುನ್ನ ನಡೆದದ್ದೇನು?
ಸೋಮವಾರ ತೀವ್ರ ರಾಜಕೀಯ ಬೆಳವಣಿಗೆಗಳು ನಡೆದಿದ್ದವು. ಸಿಎಂ ಸಿದ್ದರಾಮಯ್ಯ ಮತ್ತವರ ಪತ್ನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ವರದಿ (ECIR) ದಾಖಲಿಸಿದ ನಂತರ ಸೋಮವಾರ ಸಂಜೆ ಕಾನೂನು ತಜ್ಞರು ಮತ್ತು ಇಬ್ಬರು ಸಚಿವರನ್ನು ಭೇಟಿ ಮಾಡಿದರು.

ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ; ಕದ್ದ ಮಾಲು ವಾಪಸ್ಸು ಕೊಟ್ಟರೆ ಕಳ್ಳತನ ಮಾಫಿ ಆಗುತ್ತದೆಯೇ?
ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.

ಮುಡಾ ನಿವೇಶನ ವಾಪಸ್: ಪತ್ನಿ ತೀರ್ಮಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.

