ಸಿಎಂ ಬಿ.ಎಸ್.ಯಡಿಯೂರಪ್ಪ

ಕೊರೋನಾ ಉಲ್ಬಣ: ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಆದೇಶ
ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾತೆ ಹಂಚಿಕೆ ನಂತರ ಇದೀಗ ಜಿಲ್ಲಾ ಉಸ್ತುವಾರಿಗಾಗಿ ಲಾಬಿ, ಸಿಎಂ ಯಡಿಯೂರಪ್ಪಗೆ ನೂತನ ಸಚಿವರ ಮೊರೆ
ಬಿ ಎಸ್ ಯಡಿಯೂರಪ್ಪ ಅವರ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾಗಿರುವವರು ತಮ್ಮ ಸಚಿವಾಲಯಗಳ ಉಸ್ತುವಾರಿಯನ್ನು ಕೆಲವೇ ವಾರಗಳ ಹಿಂದೆ ವಹಿಸಿಕೊಂಡಿದ್ದಾರೆ, ಆದರೆ ಈಗಾಗಲೇ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳಿಗಾಗಿ ತೀವ್ರವಾದ ಲಾಬಿ ಮಾಡಲು ಪ್ರಾರಂಭಿಸಿದ್ದಾರೆ. ಹೆಚ್ಚಾಗಿ ತವರು ಜಿಲ್ಲೆ ಅಥವಾ ಹೆಚ್ಚು ಆದಾಯ ಗಳಿಸಬಹುದಾದ ಜಿಲ್ಲೆಗಳಿಗೆ ಬಹು ಬೇಡಿಕೆ ಇದೆ.

ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು: ಸಿದ್ದರಾಮಯ್ಯ ಲೇವಡಿ
ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ: ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಸಿಎಂ
ವಿಧಾನಸಭೆ ಕಲಾಪಕ್ಕೆ ಖಾಸಗಿ ಮಾಧ್ಯಮಗಳಿಗೆ ನಿಷೇಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿ ಟ್ವೀಟ್ ಮಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ.

ದುಬಾರಿ ಸಂಚಾರಿ ದಂಡಕ್ಕೆ ಜನಾಕ್ರೋಶ: ಗುಜರಾತ್ ಹಾದಿಯತ್ತ ಕರ್ನಾಟಕ, ಇಳಿಕೆಯಾಗುತ್ತಾ ದಂಡ!
ನೂತನ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ದಂಡದ ವಿಚಾರ ಜನರ ಆಕ್ರೋಶಕ್ಕೆ ತುತ್ತಾಗಿರುವಂತೆಯೇ ಗುಜರಾತ್ ನಂತೆಯೇ ಇದೀಗ ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಕಡಿತ ಮಾಡುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಸಿಎಂ ಯಡಿಯೂರಪ್ಪ
ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎಸ್ಆರ್ ವಿಶ್ವನಾಥ್ ಅವರನ್ನು ನೇಮಿಸಲಾಗಿದ್ದು, ಇವರಿಗೆ ಸಂಪುಟ ದರ್ಜೆ ನೀಡಿ ಆದೇಶ ಹೊರಡಿಸಲಾಗಿದೆ.

