ದೇಶಮಣಿಪುರ ಸಿಎಂ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರಗಾಮಿಗಳ ದಾಳಿ, ಓರ್ವ ಗಾಯ
ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಶಂಕಿತ ಉಗ್ರಗಾಮಿಗಳು ಸೋಮವಾರ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಸಿಎಂ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಮೇಲೆ ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.