ರಾಜ್ಯಸುರತ್ಕಲ್ ನಲ್ಲಿ ವರ್ತಕ ಜಲೀಲ್ ಕೊಲೆ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ- ಸಿಎಂ ಬೊಮ್ಮಾಯಿ
ಸುರತ್ಕಲ್ನಲ್ಲಿ ಶನಿವಾರ ತಡರಾತ್ರಿ ನಡೆದ ಜಲೀಲ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಘಟನೆಯ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಆಧಾರದಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.