ರಾಜ್ಯಸರ್ಕಾರ ಭೂಮಿ ಕೊರತೆ ಸಮಸ್ಯೆ ಎದುರಿಸುತ್ತಿದ್ದು, 'ಕನ್ನಡ ಭವನ' ನಿರ್ಮಾಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ: ಗೋವಾ ಸಿಎಂ ಸಾವಂತ್
ನಮ್ಮ ಸರ್ಕಾರ ಭೂಮಿ ಕೊರತೆ ಸಮಸ್ಯೆ ಎದುರಿಸುತ್ತಿದ್ದು, ಕನ್ನಡ ಭವನ ನಿರ್ಮಾಣಕ್ಕೆ ಭೂಮಿ ನೀಡಲು ಸಾಧ್ಯವಿಲ್ಲ. ಹೀಗಾಗಿ, ಕನ್ನಡಿಗರೇ ಜಾಗವನ್ನು ಖರೀದಿಸಿ, ಕನ್ನಡ ಭವನ ನಿರ್ಮಾಣ ಮಾಡಬಹುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ.