ರಾಜ್ಯಜೈಲಿನ ಕೈದಿಗಳಿಗೆ 'ರಾಜಾತಿಥ್ಯ'ಕ್ಕೆ ಖಂಡನೆ: ಸಿಎಂ ಮನೆಗೆ ಮುತ್ತಿಗೆ ಯತ್ನ; ಅನೇಕ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಬ್ಯಾರಿಕೇಡ್ ಏರಿದ ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ವಿರುದ್ಧ ಭಿತ್ತಪತ್ರ ಹಿಡಿದುಕೊಂಡು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.