ಸಿಎಎ ಘರ್ಷಣೆ

ದೆಹಲಿ ಹಿಂಸಾಚಾರದ ವಿಡಿಯೋಗಳಿದ್ದರೆ ಪೊಲೀಸರೊಂದಿಗೆ ಮಾತ್ರ ಹಂಚಿಕೊಳ್ಳಿ!
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವೆ ನಡೆದ ಸಂಘರ್ಷಕ್ಕೆ ಸಂಬಂಧಿಸಿ ಯಾವುದೇ ವಿಡಿಯೋಗಳಿದ್ದರೆ ಪೊಲೀಸರೊಂದಿಗೆ ಮಾತ್ರ ಹಂಚಿಕೊಳ್ಳಿ ಎಂದು ದೆಹಲಿ ಪೊಲೀಸ್ ಇಲಾಖೆ ಸೂಚಿಸಿದೆ.

ದೆಹಲಿ ಹಿಂಸಾಚಾರ: ಸಂತ್ರಸ್ಥರಿಗೆ ಪರಿಹಾರ ಘೋಷಣೆ, ತಪ್ಪಿತಸ್ಥ ಆಪ್ ನಾಯಕರಿಗೆ ದುಪ್ಪಟ್ಟು ಶಿಕ್ಷೆ ನೀಡಿ: ಸಿಎಂ ಕೇಜ್ರಿವಾಲ್
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರದ ಸಂತ್ರಸ್ಥರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರಿಹಾರ ಘೋಷಣೆ ಮಾಡಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಪ್ ನಾಯಕರು ತಪ್ಪು ಮಾಡಿದ್ದರೆ ಅವರಿಗೆ ದುಪ್ಪಟ್ಟು ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ದೆಹಲಿ ಹಿಂಸಾಚಾರ: 18 ಎಫ್ಐಆರ್, 130 ಮಂದಿ ಬಂಧನ, ಪೊಲೀಸರಿಂದ ವಾಟ್ಸಪ್ ಮೆಸೇಜ್ ಗಳ ಪರಿಶೀಲನೆ
34 ಜನರ ಸಾವಿಗೆ ಕಾರಣವಾದ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ವರೆಗೂ ದೆಹಲಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಎಫ್ಐಆರ್ ಗಳು ದಾಖಲಾಗಿದ್ದು, ದೆಹಲಿಯಾದ್ಯಂತ ಪೊಲೀಸರು 130 ಮಂದಿ ಶಂಕಿತರನ್ನು ಬಂಧಿಸಿದ್ದಾರೆ.

ಅಮೆರಿಕ ಸಿಐಆರ್`ಎಫ್ ನಿಂದ ದೆಹಲಿ ಹಿಂಸಾಚಾರ ಖಂಡನೆ, ಭಾರತ ತಿರುಗೇಟು
ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರವನ್ನು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ(ಯುಎಸ್ ಸಿಐಆರ್ ಎಫ್) ಖಂಡಿಸಿದೆ.

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 34ಕ್ಕೆ ಏರಿಕೆ, 200ಕ್ಕೂ ಅಧಿಕ ಮಂದಿಗೆ ಗಾಯ
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಶಾಂತಿ ಕಾಪಾಡಿ, ಎಂಥದ್ದೇ ಸಮಯದಲ್ಲೂ ಭ್ರಾತೃತ್ವ ಮರೆಯದಿರಿ: ಪ್ರಧಾನಿ ಮೋದಿ ಮನವಿ
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ದೆಹಲಿ ಹಿಂಸಾಚಾರದ ಎಫೆಕ್ಟ್: ಐದು ಪೊಲೀಸ್ ಅಧಿಕಾರಿಗಳ ವರ್ಗಾವಣೆ
ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರು ಐವರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ದೆಹಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಅಜಿತ್ ಧೋವಲ್
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ತಾರಕಕ್ಕೇರಿ ಹಿಂಸಾಚಾರ ಸಂಭವಿಸಿದ್ದ ದೆಹಲಿಯಲ್ಲಿ ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹೇಳಿದ್ದಾರೆ.

ದೆಹಲಿ ಹಿಂಸಾಚಾರ ಯೋಜಿತ ಪಿತೂರಿ, ನೈತಿಕ ಹೊಣೆಹೊತ್ತು ಅಮಿತ್ ಶಾ ರಾಜಿನಾಮೆ ನೀಡಲಿ ಎಂದ ಸೋನಿಯಾ ಗಾಂಧಿ
ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಗೃಹಸಚಿವ ಅಮಿತ್ ಶಾ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸೋತಿದ್ದಾರೆ ಹೀಗಾಗಿ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಒತ್ತಾಯಿಸಿದ್ದಾರೆ.

