ದೇಶಕಂಗನಾ ರಣಾವತ್ಗೆ ಕಪಾಳಮೋಕ್ಷ: CISF ಮಹಿಳಾ ಪೇದೆ ವಿರುದ್ಧ FIR ದಾಖಲು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಪೇದೆಯನ್ನು ಇನ್ನೂ ಬಂಧಿಸಿಲ್ಲ. ಆದರೆ, ಐಪಿಸಿ ಸೆಕ್ಷನ್ 321 ಮತ್ತು 341 ರ ಅಡಿಯಲ್ಲಿ ಕಾನ್ಸ್ಟೆಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.