ರಾಜ್ಯತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಸಿಡಬ್ಲ್ಯೂಎಂಎ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ- ಡಿಸಿಎಂ ಡಿಕೆ ಶಿವಕುಮಾರ್
ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಹರಿಸುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.