ಸಿದ್ದಗಂಗಾ ಮಠ

ನೈಸ್ ರಸ್ತೆಗೆ ನೀಡಿರುವ ಜಮೀನು ವಾಪಸ್ ಕೊಡಿ; ಅಶೋಕ್ ಖೇಣಿ ಚಿನ್ನದ ಕರಡಿಗೆ ಕಾಣಿಕೆ: ಸಿದ್ಧಗಂಗಾ ಮಠದ ಸ್ವಾಮೀಜಿ ಸ್ಪಷ್ಟನೆ!
ನೈಸ್ ರಸ್ತೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನೈಸ್ ರಸ್ತೆ ಹೆಸರಲ್ಲಿ ಹೆಚ್ಚುವರಿಯಾಗಿ ಜಮೀನು ತೆಗೆದುಕೊಂಡಿದ್ದಾರೆ. ರಸ್ತೆ ಆದ್ಮೇಲೆ ಟೋಲ್ ಬಳಸುತ್ತಿದ್ದಾರೆ, ಆದರೆ ಜಾಗ ಹಾಗೇ ಉಳಿದುಕೊಂಡಿದೆ. ಹೀಗಾಗಿ ಉಳಿದ ಜಮೀನು ವಾಪಸ್ ಕೊಡಿ ಎಂದು ರೈತರು ಒತ್ತಾಯ ಮಾಡುತ್ತಿದ್ದಾರೆ.

ಇಂದು ಸಿದ್ದಗಂಗಾ ಶ್ರೀಗಳ 119ನೇ ಜನ್ಮದಿನೋತ್ಸವ: ರಾಷ್ಟ್ರಪತಿ, ರಾಜ್ಯಪಾಲ ಸೇರಿ ಹಲವರು ಭಾಗಿ; ಪ್ರಧಾನಿ ಮೋದಿ ಶುಭಾಶಯ
ಇಂದು ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ.

ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ: ಕೇಂದ್ರ ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಆಗ್ರಹ
ಅನ್ನ ಕೊಟ್ಟು, ಅಕ್ಷರ ಕಲಿಸಿದ ಮಹಾಚೇತನರಿಗೆ ನಾವು ಇಂದು ನಮಿಸಲು ಬಂದಿದ್ದೇವೆ.

ಸಿದ್ದಗಂಗಾ ಮಠದ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಡಿ.ಕೆ ಶಿವಕುಮಾರ್!
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ, ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಿದ್ದಗಂಗಾ ಮಠಕ್ಕೆ ನೀಡಿದ್ದ 70 ಲಕ್ಷ ರೂ ವಿದ್ಯುತ್ ಬಿಲ್ ನೋಟಿಸ್ ವಾಪಸ್!
ಬೆಳಗಾವಿಯಲ್ಲಿ ಗುರುವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ನೋಟಿಸ್ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದರು.

ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ
ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು.

ಸೇವೆ ಕಾಯಂಗೆ ಒತ್ತಾಯ: ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಅತಿಥಿ ಉಪನ್ಯಾಸಕರ ಪಾದಯಾತ್ರೆ
ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಸೋಮವಾರ ಇಲ್ಲಿನ ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಮೂರು ದಿನಗಳ ‘ಪಾದಯಾತ್ರೆ’ ಆರಂಭಿಸಿದರು.

ತುಮಕೂರು: ಸಿದ್ಧಗಂಗಾ ಮಠದಲ್ಲಿ ವಿ ಸೋಮಣ್ಣ ಶಕ್ತಿ ಪ್ರದರ್ಶನ; ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಕ್ಕೆ ವೇದಿಕೆ ಸಿದ್ಧ
ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಚಿವರು ಭಾಗವಹಿಸಲಿದ್ದು, ಇದೇ ವೇಳೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು; ಪ್ರಧಾನಿ ಮೋದಿ ದೆಹಲಿಗೆ ಕರೆಸಿ ಸ್ಪರ್ಧಿಸಲೆಬೇಕೆಂದರು!
ಸ್ವತಃ ಅಮಿತ್ ಶಾ ಅವರೇ ಮನೆಗೆ ಬಂದು ಕೂತ್ಕೊಂಡು ಎರಡು ಕಡೆ ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದರೆ ನಾನೇನು ಮಾಡ್ಲಿ ಹೇಳಿ ಸ್ವಾಮೀಜಿ..: ಹೀಗೆ ಸಿದ್ದಗಂಗಾ ಶ್ರೀಗಳ ಮುಂದೆ ಸೋಮಣ್ಣ ವಿಧಾನಸಭಾ ಚುನಾವಣೆಯ ಸೋಲಿನ ನೋವು ತೋಡಿಕೊಂಡಿದ್ದಾರೆ.

